ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರಿಗೆ ಜನ್ಮದಿನದ ವಿಶೇಷ
ಧಾರವಾಡ: ರಾಜಕೀಯ ಜೀವನದಲ್ಲಿ ನಿರಂತರ ಹೋರಾಟ, ಪಕ್ಷ ಸಂಘಟನೆ ಹಾಗೂ ಮಹಿಳಾ ಸಬಲೀಕರಣಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ದಿನಾಂಕ :- 05-08-26 ರಂದು ಸಂಜೆ 6 ಘಂಟೆಗೆ ವೀರಭದ್ರೇಶ್ವರ ನಗರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ,
ಕಾಂಗ್ರೆಸ್ ಪಕ್ಷದ ತಳಮಟ್ಟದಿಂದಲೇ ರಾಜಕೀಯ ಪಯಣ ಆರಂಭಿಸಿದ ಗೌರಮ್ಮಾ ಬಲೋಗಿ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದರ ಜೊತೆಗೆ ಮಹಿಳೆಯರನ್ನು ರಾಜಕೀಯವಾಗಿ ಸಬಲಗೊಳಿಸಲು ನಿರಂತರವಾಗಿ ಶ್ರಮಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳ ಕುರಿತು ನಿರಂತರ ಹೋರಾಟ ನಡೆಸಿದ ಅವರು, ವಿಶೇಷವಾಗಿ ಅಡುಗೆ ಅನಿಲ (ಗ್ಯಾಸ್) ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಿ ಜನರ ಧ್ವನಿಯಾಗಿ ಗುರುತಿಸಿಕೊಂಡಿದ್ದರು. ಜನಪರ ಹೋರಾಟಗಳ ಮೂಲಕ ಪಕ್ಷದ ನಾಯಕರ ಗಮನ ಸೆಳೆದ ಅವರು, ತಮ್ಮ ಸಂಘಟನಾ ಸಾಮರ್ಥ್ಯ ಹಾಗೂ ಸೇವಾ ಮನೋಭಾವದಿಂದ ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ವಿಶೇಷ.
ಜಿಲ್ಲಾಧ್ಯಕ್ಷೆಯಾದ ನಂತರವೂ ಅವರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತುತ್ತಾ ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ಮಹಿಳಾ ಕಾಂಗ್ರೆಸ್ಗೆ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.
ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿವಲೀಲಾ ಕುಲಕರ್ಣಿ ಅವರ ಆಪ್ತ ಅಭಿಮಾನಿಯಾಗಿರುವ ಗೌರಮ್ಮಾ ಬಲೋಗಿ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಯುವ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.
ಸಾಮಾಜಿಕ ಸೇವೆ, ಜನಪರ ಹೋರಾಟ, ಪಕ್ಷ ಸಂಘಟನೆ ಮತ್ತು ಮಹಿಳಾ ನಾಯಕತ್ವದ ಮೂಲಕ ಗುರುತಿಸಿಕೊಂಡಿರುವ ಗೌರಮ್ಮಾ ಬಲೋಗಿ ಅವರಿಗೆ ಜನ್ಮದಿನದ ಅಂಗವಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಅಪಾರ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಜನಸೇವೆ ಮತ್ತು ಪಕ್ಷ ಸಂಘಟನೆಯ ಹಾದಿಯಲ್ಲಿ ಇನ್ನಷ್ಟು ಯಶಸ್ಸು, ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ದೊರೆಯಲಿ ಎಂಬುದು ಹುಬ್ಬಳ್ಳಿ ಧಾರವಾಡ ಜನರ ಆಸೇ ಹಾಗೂ ಹಾರೈಕೆಯಾಗಿದೆ.
yallu