ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ವಿಶೇಷವಾಗಿ ಉಚಿತ ಆರೋಗ್ಯ ಶಿಬಿರಕ್ಕೆ ಡಾ.ರಮೇಶ್ ಮಹಾದೇವಪ್ಪನವರ ಚಾಲನೆ
ಹುಬ್ಬಳ್ಳಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಗರದ _ ವೀರಾಪುರ ಓಣಿಯ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ _ರಮೇಶ್ ಮಹಾದೇವಪ್ಪನವರ_ ಅವರು, "ಆರೋಗ್ಯವೇ ನಿಜವಾದ ಭಾಗ್ಯ. ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಧರ್ಮಸ್ಥಳ ಸಂಸ್ಥೆ ಇಂತಹ ಶಿಬಿರಗಳನ್ನು ನಡೆಸುತ್ತಿದೆ. ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕು" ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ಶ್ರೀಮತಿ ದುರ್ಗಮ್ಮ ಬಿಜವಾಡ ಮಾತನಾಡಿ, "ಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಗಳು ಅನುಕರಣೀಯವಾಗಿವೆ. ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಶಿಕ್ಷಣ, ಆರೋಗ್ಯ, ಸ್ವಾವಲಂಬನೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಲಾಗುತ್ತಿದೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ಸೋಮಲಿಂಗ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
yallu