ಸಂತೋಷ ಲಾಡ್ ಅವರಿಗೆ ಸಚಿವ ಸ್ಥಾನ; ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ವಿಶೇಷ ಅಭಿಷೇಕ
ಸಚಿವ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ: ಮೈಲಾರಲಿಂಗೇಶ್ವರ ದೇವರಿಗೆ ವಿಶೇಷ ಅಭಿಷೇಕ.
ಹಾವೇರಿ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಿ ಶುಭ ಹಾರೈಸಲಾಯಿತು.
ಅಲ್ಲಾಪುರ ಗ್ರಾಮದ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ರೆಡ್ಡೇರ್ ಹಾಗೂ ಅವರ ಗೆಳೆಯರ ಬಳಗದ ವತಿಯಿಂದ ಮೈಲಾರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಸಲ್ಲಿಸಲಾಯಿತು.
ಈ ಮೂಲಕ ಸಚಿವ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಅವರ ಮುಂದಿನ ರಾಜಕೀಯ ಸೇವೆಗೆ ದೇವರ ಆಶೀರ್ವಾದ ಸಿಗಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ರೆಡ್ಡೇರ್, ಸಂತೋಷ್ ಲಾಡ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಅವರ ನಾಯಕತ್ವ ಹಾಗೂ ಜನಪರ ಕಾರ್ಯಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು. ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.
ಮೈಲಾರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆದ ವಿಶೇಷ ಅಭಿಷೇಕ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ರೆಡ್ಡೇರ್ ಸೇರಿದಂತೆ ಗೆಳೆಯರ ಬಳಗದ ಸದಸ್ಯರು ಭಾಗವಹಿಸಿ, ಸಚಿವ ಸಂತೋಷ್ ಲಾಡ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.
yallu