ರಾಷ್ಟ್ರೀಯ ಕೈಮಗ್ಗ ದಿನ: ಮಹಿಳಾ ಕಾರ್ಮಿಕರಿಗೆ ಗೌರವ ಸಲ್ಲಿಸಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ

ರಾಷ್ಟ್ರೀಯ ಕೈಮಗ್ಗ ದಿನ: ಮಹಿಳಾ ಕಾರ್ಮಿಕರಿಗೆ ಗೌರವ ಸಲ್ಲಿಸಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ

ಹುಬ್ಬಳ್ಳಿ:-  ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಖಾದಿ ಉದ್ಯೋಗ ಗ್ರಾಮಕ್ಕೆ ಭೇಟಿ ನೀಡಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು, ಕೈಮಗ್ಗ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. 

ಅಲ್ಲಿನ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನೂ ಆಲಿಸಿ, ಅವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಟ್ಟೆ ತಯಾರಾಗುವ ಸಂಪೂರ್ಣ ಪ್ರಕ್ರಿಯೆಯನ್ನು ವೀಕ್ಷಿಸಿದ ಅವರು, ನೂಲು ನೆಯುವಿಕೆ ಹಾಗೂ ಬಟ್ಟೆ ತಯಾರಿಕೆಯ ಹಿಂದಿರುವ ಪರಿಶ್ರಮವನ್ನು ನೇರವಾಗಿ ತಿಳಿದುಕೊಂಡಿದ್ದು ವಿಶೇಷವಾಗಿತ್ತು.

ಮಹಿಳಾ ಕಾರ್ಮಿಕರೊಂದಿಗೆ ಕೆಲಕಾಲ ಕಾಲ ಕಳೆಯುತ್ತಾ ಅವರ ಕೆಲಸದ ಅನುಭವಗಳನ್ನು ಆಲಿಸಿದರು.

ಇದೇ ವೇಳೆ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಸವಾಲುಗಳು ಹಾಗೂ ಕೈಮಗ್ಗ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ಪಡೆದು, ನಮ್ಮ ಸರಕಾರಕ್ಕೆ ಹಾಗೂ ಸೆಂಟ್ರಲ್ ಕ್ಷೇತ್ರದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆ ನೀಡಿದರು.

ಬಳಿಕ ಮಹಿಳಾ ಕಾರ್ಮಿಕರಿಗೆ ವಿಶೇಷ ಸನ್ಮಾನ ಹಾಗೂ ಗೌರವ ಸಲ್ಲಿಸಿ, ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ದೇಶದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಕೈಮಗ್ಗ ಕಾರ್ಮಿಕರ ಸೇವೆ ಅತ್ಯಂತ ಅಮೂಲ್ಯವಾಗಿದೆ ಹಾಗೂ ಎಲ್ಲರೂ ಖಾದಿ ಬಟ್ಟೆಗಳನ್ನು ಧರಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಹಿಳಾ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷರಾದ  ಸ್ನೇಹಾ ಜಾಧವ, ಬಾಳಮ್ಮ ಜಂಗಿನವರ, ಅಕ್ಕಮ್ಮ ಕಂಬಳಿ, ರೇಷ್ಮಾ ಶೇಕ್ ಸನದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.