ತಾವು ಕಲಿತ ಶಿಕ್ಷಣ ಸಂಸ್ಥೆಯಲ್ಲೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೌರಮ್ಮ ಬಲೋಗಿ ಮುಖ್ಯ ಅತಿಥಿ!
ಹುಬ್ಬಳ್ಳಿ: ಶ್ರೀ ಚನ್ನಬಸವೇಶ್ವರ ಇಂಗ್ಲಿಷ್ ಮೀಡಿಯಂ ಸ್ಕೂಲ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಆಗಸ್ಟ್ 14ರಂದು ನವನಗರದಲ್ಲಿರುವ
ಎಸ್ಸಿಬಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೌರಮ್ಮ ಬಲೋಗಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಎಲ್ಲರ ಗಮನವನ್ನು ಸೆಳೆದರು.
ಇನ್ನೂ ಗೌರಮ್ಮಾ ಬಲೋಗಿ ಅವ್ರು ಇದೆ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ, ಸಾಯಿ ಬಿ ಇಡಿ ಕಾಲೇಜ್ ನಲ್ಲಿ ಕಲಿತಿದ್ದು ಬಹಳ ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟ, ರಾಷ್ಟ್ರಭಕ್ತಿ, ಏಕತೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವ ಪೀಳಿಗೆಯ ಪಾತ್ರದ ಕುರಿತು ಸಂದೇಶ ನೀಡಲಾಯಿತು.
ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನ ಸೆಳೆದರು.
ಈ ಸಂದರ್ಭದಲ್ಲಿ ,ಹರೀಶ್ ಹೊಸೂರ, ವೈಶಾಲಿ ಹೊಸೂರ, ಪಿ ಕೆಂಗಾರ್, ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು,
ಹಾಗೂ ಪಾಲಕರು ಉಪಸ್ಥಿತರಿದ್ದು, ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹಂಚಿಕೊಂಡರು.
yallu