ಮಡಿವಾಳ ಮಾಚಿದೇವರ ದೇವಸ್ಥಾನದ 9ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರದಲ್ಲಿ ಡಾ.ರಮೇಶ್ ಭಾಗಿ
ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನ ಸೇವಾ ಸಮಿತಿ ಹಾಗೂ ದಿ ಹುಬ್ಬಳ್ಳಿ ಮಡಿವಾಳ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಇವರ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನ, ಶ್ರೀ ಗಣಪತಿ ದೇವಸ್ಥಾನ, ಶ್ರೀ ಈಶ್ವರ ದೇವಸ್ಥಾನ, ಶ್ರೀ ಮಾರುತಿ ದೇವಸ್ಥಾನ ಹಾಗೂ ಶ್ರೀ ನಾಗದೇವತಾ ದೇವಸ್ಥಾನದ 9ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸೊಸೈಟಿಯ 79ನೇ ವಾರ್ಷಿಕೋತ್ಸವದ ಅದ್ದೂರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಕಾ

ರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಪಾಲ್ಗೊಂಡು, ಶ್ರೀಗಳ ದಿವ್ಯ ಆಶೀರ್ವಾದ ಪಡೆದರು.
ಕಾರ್ಯಕ್ರಮಕ್ಕೆ ಶ್ರೀ ಶ್ರೀ ಡಾ. ಬಸವ ಮಾಚಿದೇವ ಮಹಾಸ್ವಾಮಿಗಳು ಹಾಗೂ ಶ್ರೀಮನ್ ನಿರಂಜನ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ರಘು ಕೌಟಿಲ್ಯ, ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಅನಿತಾ ಚಳಗೇರಿ, ಶ್ರೀ ಪ್ರಕಾಶ್ ಪಾಟೀಲ್, ಶ್ರೀ ಸದಾನಂದ ಪುತ್ರನ್, ಶ್ರೀ ಗಣೇಶ್ ಮಡಿವಾಳ, ಶ್ರೀ ಸಂದೀಪ್ ಹುಣಜಿ, ಶ್ರೀ ಸತೀಶ್ ಕೌತಾಳ, ಶ್ರೀ ನವೀನ್ ಕುಮಾರ್ ಮಡಿವಾಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಡಿವಾಳ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಮೆರುಗು ತಂದರು
yallu