ಮಹಾನಗರ ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಗಣೇಶ ಮಡಿವಾಳ ಗೆ ಪ್ರಶಸ್ತಿ ಪ್ರದಾನ!!
ಹುಬ್ಬಳ್ಳಿ:- ಮಡಿವಾಳ ನಗರದಲ್ಲಿ ಮಡಿವಾಳ ಮಾಚಿದೇವರ ಸೇವಾ ಟ್ರಸ್ಟ್ ವತಿಯಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಗಣೇಶ ಮಡಿವಾಳ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗಣೇಶ ಮಡಿವಾಳ ಅವರು ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ದೀರ್ಘ ಸೇವೆ ಸಲ್ಲಿಸಿದ್ದು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಆಯುಕ್ತರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅವರ ಸೇವೆಯನ್ನು ಗುರುತಿಸಿ ಮಡಿವಾಳ ಮಾಚಿದೇವರ ದೇವಸ್ಥಾನ ಟ್ರಸ್ಟ್ , ಹುಬ್ಬಳ್ಳಿ ಮಡಿವಾಳರ ಕೋ-ಅಪರೇಟಿವ್ ಕ್ರೆಡಿಟ್ ಸೋಸೈಟಿ ವತಿಯಿಂದ ಶ್ರೀ ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮಿ ಚಿತ್ರದುರ್ಗ ಇವರ ಘನ ಉಪಸ್ಥಿತಿಯಲ್ಲಿ ವಿಶೇಷ ಸತ್ಕಾರ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಗಣೇಶ ಮಡಿವಾಳ ಅವರ ದೇಶಸೇವೆ ಮತ್ತು ಪ್ರಸ್ತುತ ಸಲ್ಲಿಸುತ್ತಿರುವ ಕರ್ತವ್ಯವನ್ನು ಶ್ಲಾಘಿಸಿದರು.
yallu