ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ದೇವಿಗೆ ವಿಶೇಷ ಅಲಂಕಾರ, ಭಕ್ತಿಭಾವದಿಂದ ಪೂಜೆ

ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ದೇವಿಗೆ ವಿಶೇಷ ಅಲಂಕಾರ, ಭಕ್ತಿಭಾವದಿಂದ ಪೂಜೆ

ಹುಬ್ಬಳ್ಳಿ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಯುವ ನಾಯಕಿ ದೇವಕಿ ಯೋಗಾನಂದ ಅವರು ತಮ್ಮ ನಿವಾಸದಲ್ಲಿ ವರಮಹಾಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರ ಮಾಡಿ, ಭಕ್ತಿಭಾವದಿಂದ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಹೂವು, ಆಭರಣ ಹಾಗೂ ವಿವಿಧ ಪೂಜಾ ಸಾಮಗ್ರಿಗಳಿಂದ ದೇವಿಯನ್ನು ಸುಂದರವಾಗಿ ಅಲಂಕರಿಸಲಾಗಿದ್ದು, ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ವರಮಹಾಲಕ್ಷ್ಮಿ ದೇವಿಯ ದರ್ಶನ ಪಡೆಯಲು ನೂರಾರು ಮಹಿಳೆಯರು ಆಗಮಿಸಿದ್ದರು.

ಭಕ್ತರು ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿ, ತಮ್ಮ ಕುಟುಂಬದ ಸುಖ-ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಕಿ ಯೋಗಾನಂದ ಅವರು ಆಗಮಿಸಿದ್ದ ಮಹಿಳೆಯರಿಗೆ ಸಂಪ್ರದಾಯಬದ್ಧವಾಗಿ ಉಡಿ ತುಂಬಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಬಳಿಕ ವಿಶೇಷ ಪೂಜೆ, ಮಂಗಳಾರತಿ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ಮಹಿಳೆಯರು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಿಗೀತೆಗಳನ್ನು ಹಾಡಿ ದೇವಿಯ ಆರಾಧನೆ ಮಾಡಿದರು.

ಇನ್ನೂ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಅವರ ಮನೆಯಲ್ಲಿ ನಡೆದ ಈ ವಿಶೇಷ ಕಾರ್ಯಕ್ರಮವು ಭಕ್ತಿ, ಸಂಪ್ರದಾಯ ಹಾಗೂ ಮಹಿಳಾ ಸೌಹಾರ್ದತೆಯ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ......

ಯಲ್ಲಪ್ಪಗೌಡ ಕುಂದಗೋಳ ದಿ.ನ್ಯೂಸ್ ಒನ್ ಕನ್ನಡ ಹುಬ್ಬಳ್ಳಿ..