ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ನಿವಾಸದಲ್ಲಿ ಸತ್ಯನಾರಾಯಣ ಪೂಜೆ: ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಭಾಗಿ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೌರಮ್ಮಾ ಬಲೋಗಿ ಅವರ ನಿವಾಸದಲ್ಲಿ ಸತ್ಯನಾರಾಯಣ ಪೂಜೆಯನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.
ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಅವರು ಭಾಗವಹಿಸಿ, ಸತ್ಯನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗೌರಮ್ಮಾ ಬಲೋಗಿ ಅವರು ಮಹಾನಗರ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಅವರನ್ನು ಸನ್ಮಾನಿಸಿ, ವಿಶೇಷ ಉಡುಗೊರೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
yallu