ಗೌರಮ್ಮಾ ಬಲೋಗಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ: ಶಾಸಕ ವಿನಯ್ ಕುಲಕರ್ಣಿ ದಂಪತಿ ಸೇರಿ ಕಾಂಗ್ರೆಸ್ ಮುಖಂಡರು ಭಾಗಿ
ಧಾರವಾಡ :- ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೌರಮ್ಮಾ ಬಲೋಗಿ ಅವರ ನಿವಾಸದಲ್ಲಿ ಸತ್ಯನಾರಾಯಣ ಪೂಜೆಯನ್ನು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ಹಮ್ಮಿಕೊಳ್ಳಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಧರ್ಮಪತ್ನಿ ಶಿವಲೀಲಾ ಕುಲಕರ್ಣಿ ಅವರು ಭಾಗವಹಿಸಿ ಸತ್ಯನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಲೋಕಕಲ್ಯಾಣ, ಸುಖ-ಶಾಂತಿ ಹಾಗೂ ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ, ಬಸವರಾಜ ಕೊರವರ, ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಧಾರವಾಡದ ನಿವಾಸಿ ಮಹಿಳೆಯರು ಸೇರಿದಂತೆ ಹಲವರು ಉಪಸ್ಥಿತರಿದ್ದು, ಪೂಜಾ ಕಾರ್ಯಕ್ರಮದಲ್ಲಿ ಭಕ್ತಿಭಾವದಿಂದ ಪಾಲ್ಗೊಂಡರು.
ಪೂಜೆಯ ಅಂಗವಾಗಿ ಸತ್ಯನಾರಾಯಣ ಸ್ವಾಮಿಗೆ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು. ಸತ್ಯನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದರು. ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ದೇವಕಿ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಅವರನ್ನು ಗೌರಮ್ಮಾ ಬಲೋಗಿ ಅವರು ಆತ್ಮೀಯವಾಗಿ ಸನ್ಮಾನಿಸಿ, ವಿಶೇಷ ಉಡುಗೊರೆ ನೀಡಿ ಗೌರವಿಸಿದರು.
ಸತ್ಯನಾರಾಯಣ ಸ್ವಾಮಿಯ ಕೃಪೆಯಿಂದ ಎಲ್ಲರ ಮನೆಗಳಲ್ಲಿ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ನೆಲೆಸಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
yallu