ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಮಾನ ನಿಲ್ದಾಣದಲ್ಲಿ MLC ಪ್ರದೀಪ್ ಶೆಟ್ಟರ್ ಅವರಿಂದ ವಿಶೇಷ ಸತ್ಕಾರ
ಹುಬ್ಬಳ್ಳಿ:- ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರ ಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭಕ್ಕಾಗಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರನ್ನು MLC ಪ್ರದೀಪ್ ಶೆಟ್ಟರ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ, ವಿಶೇಷವಾಗಿ ಸತ್ಕರಿಸಿದರು.
ಮಂಗಳವಾರ ರಾತ್ರಿ ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಪ್ರದೀಪ್ ಶೆಟ್ಟರ್ ಅವರು ಮೈಸೂರು ರೇಷ್ಮೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಉದ್ಘಾಟನೆಯು ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಕೆ.ಎಲ್.ಇ. ಸಂಸ್ಥೆಯ ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಈ ಭಾಗದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ದೊರೆಯಲಿದೆ.
yallu