ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ತೋಳನಕೆರೆಯಲ್ಲಿ 'ಬೃಹತ್ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಗಿಂಗ್' ಯಶಸ್ವಿ

 ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ತೋಳನಕೆರೆಯಲ್ಲಿ 'ಬೃಹತ್ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಗಿಂಗ್' ಯಶಸ್ವಿ

ಹುಬ್ಬಳ್ಳಿ-ಧಾರವಾಡ ಅವಳಿನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿಸುವ ಸಂಕಲ್ಪದೊಂದಿಗೆ, ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ ಇಂದು ಬೆಳಿಗ್ಗೆ 7:00 ಗಂಟೆಗೆ ಹುಬ್ಬಳ್ಳಿಯ ತೋಳನಕೆರೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಬೃಹತ್ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಗಿಂಗ್' ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು.

ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶ್ರೀಮತಿ ಸ್ನೇಹಲ್ ಆರ್. (ಭಾ.ಆ.ಸೇ)ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಚ್ಛತೆಯ ಮಹತ್ವದ ಕುರಿತು ಸಂದೇಶ ಸಾರಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ರುದ್ರೇಶ್ ಎಸ್. ಘಾಳಿ (ಕ.ಆ.ಸೇ)*ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿ ಹಾಗೂ ಖ್ಯಾತ ಚಲನಚಿತ್ರ ನಟಿ ಮಯೂರಿ ಮತ್ತು ಬಾಲನಟಿ ಕು. ಶಾರ್ವರಿ ಅವರು ಖುದ್ದಾಗಿ ಭಾಗವಹಿಸಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಈ ಅಭಿಯಾನದಲ್ಲಿ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಶ್ರೀಮತಿ ಅನುರಾಧಾ ವಸ್ತ್ರದ, ಉಪ ಆಯುಕ್ತರು (ಅಭಿವೃದ್ಧಿ) ಶ್ರೀ ವಿಜಯ ಕುಮಾರ್ ಆರ್, ಮುಖ್ಯ ಲೆಕ್ಕಾಧಿಕಾರಿ ಶ್ರೀ ಶಂಕರಾನಂದ ಬನಶಂಕರಿ, ಹಾಗೂ ಘನತ್ಯಾಜ್ಯ ವಸ್ತು ವಿಭಾಗ ಮತ್ತು ಪರಿಸರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀ ಸಂತೋಷ್ ಕುಮಾರ್ ಯರಂಗಳ್ಳಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಅವಳಿನಗರದ ನೂರಾರು ಸಾರ್ವಜನಿಕರು, ಸ್ವಯಂಸೇವಕರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಾಲಿಕೆಯೊಂದಿಗೆ ಕೈಜೋಡಿಸಿದರು. ಪಾಲಿಕೆ ಕರೆಗೆ ಸ್ಪಂದಿಸಿ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದ ಸಮಸ್ತ ಹುಬ್ಬಳ್ಳಿ-ಧಾರವಾಡದ ಜನತೆಗೆ ಮಹಾನಗರ ಪಾಲಿಕೆ ಕೃತಜ್ಞತೆ ಸಲ್ಲಿಸಿದೆ.

ಗಾಂಧಿ ಜಯಂತಿಯ ಪ್ರಯುಕ್ತ ಹುಬ್ಬಳ್ಳಿಯ ತೋಳನಕೆರೆಯಲ್ಲಿ ಇಂದು ಬೆಳಿಗ್ಗೆ ಬೃಹತ್ ಸ್ವಚ್ಛತಾ ಅಭಿಯಾನ ಮತ್ತು ಪ್ಲಾಗಿಂಗ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಜಿಲ್ಲಾಧಿಕಾರಿ ಶ್ರೀಮತಿ ಸ್ನೇಹಲ್ ಆರ್ ಅವರು ಕಾರ್ಯಕ್ರಮ ಉದ್ಘಾಟಿಸಿದರೆ, ಆಯುಕ್ತ ಡಾ. ರುದ್ರೇಶ್ ಘಾಳಿ ಅವರು ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿ ನಟಿ ಮಯೂರಿ ಮತ್ತು ಬಾಲನಟಿ ಶಾರ್ವರಿ ಅವರು ಶ್ರಮದಾನ ಮಾಡಿ ಗಮನ ಸೆಳೆದರು.