ಡಾ. ರಮೇಶ್ ಮಹಾದೇವಪ್ಪನವರಿಗೆ ಶ್ರೀ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಡಾ. ರಮೇಶ್ ಮಹಾದೇವಪ್ಪನವರಿಗೆ ಶ್ರೀ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ  ಪ್ರದಾನ

ಹುಬ್ಬಳ್ಳಿಯಲ್ಲಿ ನಡೆದ ಶ್ರೀ ಆರ್ಯಭಟ ಹಾಗೂ ಶ್ರೀ ಆಲೂರ ವೆಂಕಟರಾವ್ ಸದ್ಭಾವನಾ ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರಿಗೆ “ಶ್ರೀ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಲಾಯಿತು.
ಶ್ರೀ ಸರ್ವೇಜನ ಆರ್ಟ್ ಅಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ರಮೇಶ್ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಸಮಾಜಮುಖಿ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯನ್ನು ಗುರುತಿಸಿ ಅವರಿಗೆ “ಶ್ರೀ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಡಾ. ರಮೇಶ್ ಮಹಾದೇವಪ್ಪನವರು, ಈ ಗೌರವವು ತಮ್ಮ ಸಮಾಜಮುಖಿ ಸೇವೆಗೆ ಮತ್ತಷ್ಟು ಪ್ರೋತ್ಸಾಹ ಹಾಗೂ ಜವಾಬ್ದಾರಿಯನ್ನು ನೀಡಿದೆ. ಸನ್ಮಾನಕ್ಕಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ವೇದಮೂರ್ತಿ ಮಡಿವಾಳೇಶ್ವರ ಸ್ವಾಮಿಗಳು, ಪರಮಪೂಜ್ಯ ಶ್ರೀ ಮೋಹನ್ ಗುರುಸ್ವಾಮಿಗಳು ಹಾಗೂ ಶ್ರೀ ಅವದೂತ ಮಹರ್ಷಿ ಸಿದ್ದಾರ್ಥ ಸ್ವಾಮೀಜಿಗಳ ದಿವ್ಯ ಸಾನಿಧ್ಯವಿತ್ತು.
ಕಾರ್ಯಕ್ರಮದಲ್ಲಿ ಡಾ. ಶರಣಪ್ಪ ಕೊಟಗಿ, ಶಶಿಧರ್ ಕೋಟೆ, ಡಾ. ಕೆಂಚನೂರು ಶಂಕರ್, ಶಶಿವಕುಮಾರ ಆರಾಧ್ಯ, ಶ್ರೀ ರವಿಚಂದ್ರ ದೊಡ್ಡಿಹಾಳ ಸೇರಿದಂತೆ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.

ಸಮಾಜ ಸೇವೆಯ ಗುರುತಾಗಿ ದೊರೆತ ಶ್ರೀ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಗೆ ಡಾ. ರಮೇಶ್ ಮಹಾದೇವಪ್ಪನವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.