ಗಾಂಜಾ ಮಾರಾಟಕ್ಕೆ ಬ್ರೇಕ್: ಇಬ್ಬರು ಆರೋಪಿಗಳು ಅರೆಸ್ಟ್!
ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು 1 ಲಕ್ಷ 60 ಸಾವಿರದ 650 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಕಾರವಾರ ರೋಡ್ ಬ್ರಿಡ್ಜ್ನಿಂದ ತಿಮ್ಮಸಾಗರಕ್ಕೆ ಹೋಗುವ ರಸ್ತೆಯ ಸಮೀಪ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯ ತಂಡ ದಾಳಿ ನಡೆಸಿದೆ.
ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 3 ಕೆಜಿ 213 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್ಗಳು, 1,500 ರೂಪಾಯಿ ನಗದು ಸೇರಿದಂತೆ ಒಟ್ಟು 1,60,650 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು 26 ವರ್ಷದ ತೇಜಸ್ ರಾಮಗಿರಿ, ಕಲಘಟಗಿ ತಾಲೂಕಿನ ಬಾಣಗಿ-ಗುಡಿಹಾಳ ಕ್ರಾಸ್ ನಿವಾಸಿ ಹಾಗೂ 26 ವರ್ಷದ ಜೋಸೆಫ್ ದಾಸ್, ಹಳೇ ಹುಬ್ಬಳ್ಳಿಯ ಆನಂದನಗರ ನಿವಾಸಿ ಎಂದು ಗುರುತಿಸಲಾಗಿದೆ.
ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
yallu