ದೆಹಲಿ ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಭಾಗಿ: ಎಸ್‌ಐಆರ್ ರದ್ದತಿಗೆ ಆಗ್ರಹ
ದೆಹಲಿ: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಯಿತು.
ಈ ಪ್ರತಿಭಟನಾ ರ್ಯಾಲಿಯಲ್ಲಿ ರಾಜ್ಯದ ನಾಯಕರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸುವಂತೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಗೌರಮ್ಮಾ ಬಲೋಗಿ ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
yallu