ಧಾರವಾಡ:- ಮೋಹನ ಲಿಂಬಿಕಾಯಿಯವರ ಪರ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಮತಯಾಚನೆ

ಧಾರವಾಡ:- ಮೋಹನ ಲಿಂಬಿಕಾಯಿಯವರ ಪರ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಮತಯಾಚನೆ

ಧಾರವಾಡ: ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಹಾಗೂ ಜನಪರ ಕಾಳಜಿಯ ಕುರಿತು ಮತದಾರರಿಗೆ ಮಾಹಿತಿ ನೀಡಿದ ಅವರು, ಪದವೀಧರರ ಹಿತಾಸಕ್ತಿಗಳನ್ನು ಕಾಪಾಡಲು ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ ಗೆಲ್ಲಿಸುವ ಮೂಲಕ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು ಎಂದು ಗೌರಮ್ಮಾ ಬಲೋಗಿ ಅವರು ಮನವಿ ಮಾಡಿದರು.