ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅಬ್ಬರದ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅಬ್ಬರದ ಪ್ರಚಾರ

ಮೋಹನ ಲಿಂಬಿಕಾಯಿ ಪರ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಮತಯಾಚನೆ

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಧಾರವಾಡದ ವಾರ್ಡ್ ನಂಬರ್ 5 ರಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಮಾಹಿತಿ ನೀಡಿದರು. ಜೊತೆಗೆ ಪದವೀಧರರ ಹಿತಾಸಕ್ತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಹೊಂದಿರುವ ಕಾಳಜಿಯನ್ನು ವಿವರಿಸಿ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಮತ ನೀಡಿ ಬೆಂಬಲಿಸುವಂತೆ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿಯಾದ ಗೌರಮ್ಮಾ ಬಲೋಗಿ ಅವರು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಪದವೀಧರರ ಧ್ವನಿಗೆ ಮತ್ತಷ್ಟು ಬಲ ನೀಡುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸವಿತಾ ಶಿಂದೇ ಸಹ ಮತಯಾಚನೆ ಮಾಡಿ ಎಲ್ಲರಿಗೂ ಮತ ಹಾಕುವಂತೆ ಮನವಿ ಮಾಡಿಕೊಂಡರು.