ಹುಬ್ಬಳ್ಳಿ: ಆರ್.ವಿ.ಎಸ್ ಇಂಟರ್ನ್ಯಾಷನಲ್  ಪಬ್ಲಿಕ್ ಸ್ಕೂಲ್‌ನಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ

ಹುಬ್ಬಳ್ಳಿ: ಆರ್.ವಿ.ಎಸ್ ಇಂಟರ್ನ್ಯಾಷನಲ್  ಪಬ್ಲಿಕ್ ಸ್ಕೂಲ್‌ನಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ

ಹುಬ್ಬಳ್ಳಿ: ಆರ್.ವಿ.ಎಸ್ ಇಂಟರ್ನ್ಯಾಷನಲ್  ಪಬ್ಲಿಕ್ ಸ್ಕೂಲ್‌ನಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನವಲಗುಂದ ತಾಲ್ಲೂಕಿನ ಖನ್ನೂರಿನ ಆರ್.ವಿ. ಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಪಂಚವಟಿಕಾ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು. ಅಲ್ಲದೇ "ಬಟರ್ ಫ್ಲೈ" ಉದ್ಯಾನ ಪರಿಕಲ್ಪನೆಯಡಿ ಸುಮಾರು 200ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಚೇರ್ಮನ್ ಸುರೇಶ್ ಅಂಗಡಿ, ಪ್ರಾಂಶುಪಾಲೆ ಲತಾ ಸಿದ್ದಾರಾಮ ಶೆಟ್ಟರ್, ವೈಸ್ ಪ್ರಿನ್ಸಿಪಲ್ ಪಿರೋಜ ಖಾನ್ ಹಾಗೂ ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು, ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಸಿ ನೆಡುವ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.