ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದರಿಂದ KPCC ಅಧ್ಯಕ್ಷ ಬಿ.ಕೆ. ಹರಿ ಪ್ರಸಾದ್, ಹಾಗೂ MLC ಸಲೀಂ ಅಹ್ಮದ್ ಭೇಟಿ

ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದರಿಂದ KPCC ಅಧ್ಯಕ್ಷ ಬಿ.ಕೆ. ಹರಿ ಪ್ರಸಾದ್, ಹಾಗೂ MLC ಸಲೀಂ ಅಹ್ಮದ್  ಭೇಟಿ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಅವರು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿ ಪ್ರಸಾದ್ ಹಾಗೂ ವಿಧಾನ ಪರಿಷತ್ ಸದಸ್ಯ (MLC) ಸಲೀಂ ಅಹ್ಮದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ದೇವಕಿ ಯೋಗಾನಂದ ಅವರು ಬಿ.ಕೆ. ಹರಿ ಪ್ರಸಾದ್ ಅವರನ್ನು ಹೂಗುಚ್ಛ ನೀಡಿ ಗೌರವಿಸಿದರು. ಪಕ್ಷದ ಸಂಘಟನೆ, ಕಾಂಗ್ರೆಸ್ ಬಲವರ್ಧನೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಸಂಘಟಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು.
ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.