ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ವಿಶೇಷ ಸನ್ಮಾನ
ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಶಾಸಕ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗೌರಮ್ಮಾ ಬಲೋಗಿ ಅವರು ಶಾಲು ಹೊದಿಸಿ, ಹಾರ ಹಾಕಿ ಗೌರವ ಸಲ್ಲಿಸಿ ಶುಭಾಶಯ ಕೋರಿದರು.
ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ನ್ಯಾಯದ ಮೇಲೆ ವಿಶ್ವಾಸ ಸದಾ ಉಳಿಯುತ್ತದೆ ಎಂಬ ನಂಬಿಕೆ ವ್ಯಕ್ತಪಡಿಸಿದರು.
ಈ ಭೇಟಿ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ವಿನಯ್ ಕುಲಕರ್ಣಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು.
ನಂತರ ಪರಸ್ಪರ ಮಾತುಕತೆ ನಡೆಸಿ ಪಕ್ಷದ ಸಂಘಟನೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ,ವಿನಯಕುಮಾರ್ ಬಲೋಗಿ, ಶಂಕರ ಇಳಿಗೇರ್, ಶಿವು ಮೆಣಸಿನಕಾಯಿ, ಚಂದ್ರಗೌಡ ಪಾಟೀಲ್, ಆತ್ಮನಂದ್ ಅಂಗಡಿ, ಆಸೀಫ್ ಸನದಿ, ಮನೋಜ್ ಕರ್ಜಗಿ,ಸೇರಿದಂತೆ ಇತರರು ಉಪಸ್ಥಿತರಿದ್ದರು.
yallu