ಸರಕಾರಿ ಶಾಲೆ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿದ ಕಟ್ಟಡ ಕಾರ್ಮಿಕರ ಸಂಘ!

ಸರಕಾರಿ ಶಾಲೆ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿದ ಕಟ್ಟಡ ಕಾರ್ಮಿಕರ ಸಂಘ!


ಹುಬ್ಬಳ್ಳಿ: ಮಂಟೂರಿನ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಅನ್ನದಾನೇಶ್ವರಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಬೇಕು ಎಂದು ಗಣ್ಯರು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಅನ್ನದಾನೇಶ್ವರಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರವಿ ಬೆಟಿಗೇರಿ, ಧಾರವಾಡ ಜಿಲ್ಲಾ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ದುರ್ಗಪ್ಪ ಚಿಕ್ಕದುಂಬಳ, ಸರ್ವಧರ್ಮ ಕಟ್ಟಡ ಕಾರ್ಮಿಕರ ಸಂಘದ ಸಂಯೋಜಕ ಕಾಶಿಮ್ ಎಸ್. ಕೂಡಲಗಿ, ಗಾಳಿ ದುರ್ಗಾದೇವಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಕಾಶ್ ಬಿರಲದಿನ್ನಿ, ಶಾಲೆಯ ಶಿಕ್ಷಕರು, ಮಂಟೂರಿನ ಗುರು-ಹಿರಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಉತ್ಸಾಹದಿಂದ ಭಾಗವಹಿಸಿ ಸಂಘದ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.