ತಲೆ ಮೇಲೆ ಸಿಲಿಂಡರ್ ಹೊತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ!

ತಲೆ ಮೇಲೆ ಸಿಲಿಂಡರ್ ಹೊತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ!

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಹುಬ್ಬಳ್ಳಿಯ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೋಪನಕೊಪ್ಪದಲ್ಲಿ ಪ್ರತಿಭಟನೆ ನಡೆಸಲಾಯಿತು.


ಈ  ವೇಳೆ ಸೌದೆ ಒಲೆ ಹಚ್ಚಿ ಚಹಾ ತಯಾರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾಸ್ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದರ ಹೊರೆ ಸಾಮಾನ್ಯ ಜನರು ಹಾಗೂ ಬಡ ಕುಟುಂಬಗಳ ಮೇಲೆ ಬೀಳುತ್ತಿದೆ. ತಕ್ಷಣವೇ ಸಿಲಿಂಡರ್ ದರ ಇಳಿಸಿ ಜನರಿಗೆ ಪರಿಹಾರ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಒತ್ತಾಯ ಮಾಡಿದರು.

ಚಹಾ ತಯಾರಿಸಿದ ಬಳಿಕ ಸಾರ್ವಜನಿಕರಿಗೆ ಹಂಚುವ ಮೂಲಕ ತಮ್ಮ ವಿನೂತನ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸ್ನೇಹಾ ಜಾದವ್,ಮೇಘನಾ ಹಿರೇಮಠ, ರೇಷ್ಮಾ ಶೇಕ್ ಸನದಿ,ಸುನಂದಾ ಕುಸುಗಲ್, ರೂಪಾ ಕುರಹಟ್ಟಿ,ಸುಜತಾ,ಗೀತಾ,ಗೀತಾಶೆಟ್ಟಿ, ಶಾರದಾ ಚಿಕ್ಕತುಂಬಿ,ಸಂದ್ಯಾ ನಾಗರಹಳ್ಳಿ,ಬಸಮ್ಮಾ ಹಾದಿಮನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.