ಕಾಂಗ್ರೆಸ್ ನಾಯಕರನ್ನ ಭೇಟಿಯಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ!
Hubli dharwad
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಪಕ್ಷದ ಇತರ ಪ್ರಮುಖ ನಾಯಕರನ್ನು ಭೇಟಿಯಾಗಿ ಸಂಘಟನೆ ಬಲವರ್ಧನೆ, ಮಹಿಳಾ ಸಬಲೀಕರಣ ಹಾಗೂ ಪಕ್ಷದ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಭೇಟಿಯ ವೇಳೆ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ತಳಮಟ್ಟದಿಂದ ಇನ್ನಷ್ಟು ಸದೃಢಗೊಳಿಸುವುದು, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಕುರಿತು ಅಭಿಪ್ರಾಯ ವಿನಿಮಯ ನಡೆಯಿತು.
ಈ ಭೇಟಿಯು ಮಹಿಳಾ ಕಾಂಗ್ರೆಸ್ ಸಂಘಟನೆಯ ಬೆಳವಣಿಗೆಗೆ ಹೊಸ ಉತ್ತೇಜನ ನೀಡಲಿದ್ದು, ಪಕ್ಷದ ಕಾರ್ಯಕರ್ತೆಯರಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದು ತಿಳಿದುಬಂದಿದೆ.
yallu