ದಿವ್ಯಜ್ಞಾನ ಗುರುಕುಲದ 5ನೇ ವಾರ್ಷಿಕೋತ್ಸವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ!

ದಿವ್ಯಜ್ಞಾನ ಗುರುಕುಲದ 5ನೇ ವಾರ್ಷಿಕೋತ್ಸವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ!

ಹುಬ್ಬಳ್ಳಿ: ನಗರದ ಶ್ರೀ ಜಗದ್ಗುರು ಮೂರು ಸಾವಿರ ಮಠದ ಸಭಾಭವನದಲ್ಲಿ ದಿವ್ಯಜ್ಞಾನ ಗುರುಕುಲದ 5ನೇ ವಾರ್ಷಿಕೋತ್ಸವದ ಅಂಗವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ವಿಶೇಷ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಭಾಗವಹಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು. 

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಂಡು ಸಮಾಜಮುಖಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಳಿಕ ಡಾ. ರಮೇಶ್ ಮಹಾದೇವಪ್ಪನವರ ಅವರನ್ನು ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಗುರುಸಿದ್ದೇಶ್ವರ ಮಹಾಸ್ವಾಮಿಗಳು, ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮ ಮಹಾಸ್ವಾಮಿಗಳು, ಶ್ರೀ ಅಭಿನವ ಬಸವಣ್ಣ ಅಜ್ಜನವರು ಹಾಗೂ ವೈಜನಾಥ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಪರಶುರಾಮ್ ದಿವಾನದ,  ಎಸ್.ಎಸ್. ಪಾಟೀಲ್,ಅಶೋಕ್ ಕುಮಾರ್ ಬೆಸ್ತ್,  ಈರಣ್ಣ ಹುಲಗುಂದಿ, ಮನೋಜ್ ಕುಮಾರ್ ತೋಟಗೇರ್ ಹಾಗೂ ಶ್ರೀ ಬಸವಲಿಂಗಯ್ಯ ಶಾಸ್ತ್ರಿಗಳು (ಸೂರ್ಯನಿಗೆ ಮಠ) ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪಾಲಕರು, ಗುರುಕುಲದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.