ಶಕುಂತಲಾ ಮತ್ತಿಕಟ್ಟಿ ಅವರ ಶಿವಗಣಾರಾಧನೆಯಲ್ಲಿ ಎಂಎಲ್‌ಸಿ ಪ್ರದೀಪ್ ಶೆಟ್ಟರ್ ವಿಶೇಷ ನಮನ !

ಶಕುಂತಲಾ ಮತ್ತಿಕಟ್ಟಿ ಅವರ ಶಿವಗಣಾರಾಧನೆಯಲ್ಲಿ ಎಂಎಲ್‌ಸಿ ಪ್ರದೀಪ್ ಶೆಟ್ಟರ್ ವಿಶೇಷ ನಮನ !

ಹುಬ್ಬಳ್ಳಿ: ಮಾನ್ಯ ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ವೀರಣ್ಣ ಮತ್ತಿಕಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಶಕುಂತಲಾ ಮತ್ತಿಕಟ್ಟಿ ಅವರ ಶಿವಗಣಾರಾಧನೆ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಮತಿ ಶಕುಂತಲಾ ಮತ್ತಿಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಬಳಿಕ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಸಂತೋಷ ವೇರ್ಣೆಕರ,ಹಾಗೂ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ, ದಿವಂಗತರಿಗೆ ಗೌರವ ನಮನ ಸಲ್ಲಿಸಿದರು.